alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9,062 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 36 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,134 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,05,058 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.56 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,36,54,064 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 25,90,557 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,08,57,15,251 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...