
ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಮುಖವಾಗಿದ್ದು ಕಳೆದ 24 ಗಂಟೆಯಲ್ಲಿ 36 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,289 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,01,166 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.58 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,36,99,435 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 13,15,536 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,09,40,48,140 ಡೋಸ್ ಲಸಿಕೆ ಹಾಕಲಾಗಿದೆ.