alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕುಸಿತ; ಸಾವನ್ನಪ್ಪಿದವರ ಸಂಖ್ಯೆ ದಿಢೀರ್‌ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕುಸಿತ; ಸಾವನ್ನಪ್ಪಿದವರ ಸಂಖ್ಯೆ ದಿಢೀರ್‌ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 11,539 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಮುಖವಾಗಿದ್ದು ಕಳೆದ 24 ಗಂಟೆಯಲ್ಲಿ 43 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,332 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 99,879 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,12,218 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 26,58,755 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,09,67,06,895 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...