
ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಕುಸಿತವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,368 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 97,648 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.53ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,23,944 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 35,33,466 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,10,02,40,361 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,29,546 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.