ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ ಒಂದೇ ದಿನದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 4,510 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,403 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 5,640 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 46,216 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,72,980 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 12,27,054 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,16,95,51,591 ಡೋಸ್ ಲಸಿಕೆ ಹಾಕಲಾಗಿದೆ.