alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 25,404 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,32,89,579ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 339 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 443213 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 362207 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37127 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32484159 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,30,891 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 78,66,950 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 75,22,38,324 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...