alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ ಮಹಾಮಾರಿಗೆ 284 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ ಮಹಾಮಾರಿಗೆ 284 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 27,176 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,33,16,755ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 284 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 443497 ಕ್ಕೆ ಏರಿಕೆಯಾಗಿದೆ.

ಪೋಷಕರಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿಷ್ಠಿತ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ

ಇನ್ನು ದೇಶದಲ್ಲಿ 351087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38012 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32522171 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 16,10,829 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 61,15,690 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 75,89,12,277 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...