alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; 24 ಗಂಟೆಯಲ್ಲಿ 562 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; 24 ಗಂಟೆಯಲ್ಲಿ 562 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಮೂರನೇ ಅಲೆ ಆತಂಕ ಇನ್ನಷ್ಟು ಹೆಚ್ಚಿದೆ. ಕಳೆದ 24 ಗಂಟೆಯಲ್ಲಿ 42,625 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,17,69,132ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 562 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 425757ಕ್ಕೆ ಏರಿಕೆಯಾಗಿದೆ.

BIG BREAKING: ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್..?

ಇನ್ನು ದೇಶದಲ್ಲಿ 410353 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 36668 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30933022 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 18,47,518 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಇದುವರೆಗೆ 47,31,42,307 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 24 ಗಂಟೆಯಲ್ಲಿ 62,53,741 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 48,52,86,570 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...