alex Certify ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ  ಕಳೆದ ಎರಡು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 11,739 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 25 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,999 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 92,576 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10,917 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,72,398 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 12,72,739 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,08,51,580 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,53,940 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...