alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 13,615 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 20 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,474 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ1,31,043 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13,265 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,29,96,427 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 10,64,038 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,00,59,536 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,21,292 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...