ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 20,279 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.5.3ರಷ್ಟು ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಂದು ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 36 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,033 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,52,200 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,143 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,32,10,522 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 28,83,489 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,01,99,33,453 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,83,657 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.