alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ; 24 ಗಂಟೆಯಲ್ಲಿ 419 ಜನ ವೈರಸ್ ಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆ; 24 ಗಂಟೆಯಲ್ಲಿ 419 ಜನ ವೈರಸ್ ಗೆ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,070 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,19,34,455ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 491 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,27,862ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 406822 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 43910 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31099771 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,22,221 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 55,91,657 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 50,68,10,492 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...