alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 1072 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 1072 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,49,394 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ 1072 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 498983ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1435569 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 246674 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40017088 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 55,58,760 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,68,47,16,068 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,11,666 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...