alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,685 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 83 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,16,755 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 21,530 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,499 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,78,087 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 29,82,451 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,82,55,75,126 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,91,425 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...