alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ 4ನೇ ಅಲೆ ಆತಂಕದ ನಡುವೆ ಇಂದು ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,568 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು, 24 ಗಂಟೆಯಲ್ಲಿ 20 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 523889 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 19137 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2911 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42541887 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 16,23,795 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,89,41,68,295 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,19,552 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...