alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ ದಿಢೀರ್ ಏರಿಕೆ; ಹೆಚ್ಚಿದ 4ನೇ ಅಲೆ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ ದಿಢೀರ್ ಏರಿಕೆ; ಹೆಚ್ಚಿದ 4ನೇ ಅಲೆ ಆತಂಕ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಕೋವಿಡ್ 4ನೇ ಅಲೆಯ ಭೀತಿ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 5,233 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ನೋಡುವುದಾದರೆ ಒಂದೇ ದಿನದಲ್ಲಿ ಮತ್ತೆ 7 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,715ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 28857 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,36,710 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 14,94,086 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,94,43,26,416 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,13,361 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

— ANI (@ANI) June 8, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...