ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದೆ.ಕಳೆದ 24 ಗಂಟೆಯಲ್ಲಿ 2,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ 4ನೇ ಅಲೆ ಭೀತಿ ನಡುವೆ ಇದೀಗ ಭಾರತದಲ್ಲಿ ಮೊದಲ BA.4 ಒಮಿಕ್ರಾನ್ ಹೊಸ ರೂಪಾಂತರಿ ವೈರಸ್ ಹೈದರಾಬಾದ್ ನಲ್ಲಿ ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 20 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,323 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 15,044 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,614 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,92,455 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 15,12,766 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,96,32,518 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,51,179 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.