alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,226 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 65 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,413 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 14,955 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,202 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,97,003 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,37,381 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,92,28,66,524 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,42,681 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...