alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ ?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 19,406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,649ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,34,793 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.50ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,65,552 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 32,73,551 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,05,92,20,794 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,91,187 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 6, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...