alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; ಆದರೆ ಸಾವಿನ ಸಂಖ್ಯೆ 24 ಗಂಟೆಯಲ್ಲಿ ದಿಢೀರ್ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; ಆದರೆ ಸಾವಿನ ಸಂಖ್ಯೆ 24 ಗಂಟೆಯಲ್ಲಿ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ನಿನ್ನೆಗಿಂತ ಸೋಂಕಿತರ ಸಂಖ್ಯೆ ಇಂದು ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524064ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 20635 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3079 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42557495 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 17,39,403 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,20,07,487 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,60,613 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...