ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ 21-06-2022 9:14AM IST / No Comments / Posted In: Latest News, India, Live News ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತವಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,923 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 24 ಗಂಟೆಯಲ್ಲಿ 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,890ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 79,313 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7,293 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,15,193 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 13,00,024 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,32,43,003 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,88,641 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. #COVID19 | India reports 9,923 fresh cases, 7,293 recoveries and 17 deaths in the last 24 hours. Active cases 79,313Daily positivity rate 2.55% pic.twitter.com/AcHIh3KVY1 — ANI (@ANI) June 21, 2022