
ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 38 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,941 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 83,990 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10,972 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,36,027 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 14,91,941 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,62,11,973 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,56,410 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.