
ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು 24 ಗಂಟೆಯಲ್ಲಿ 26 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,454 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,30,713 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,629 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,29,83,162 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 11,44,145 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,98,88,77,537 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,78,266 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.