alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 15 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 15 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 15,754 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 527253 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,01,830 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.53ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,36,85,535 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 31,52,882 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,09,27,32,604 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,54,491 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) August 19, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...