alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 4,362 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಕುಸಿತವಾಗಿದ್ದು, 24 ಗಂಟೆಯಲ್ಲಿ ಮತ್ತೆ 66 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,102 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 54,118 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9,620 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,23,98,095 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,80,144 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,90,61,887 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,12,926 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...