
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 31 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,23,920 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 19,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,802 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,44,689 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 3,27,327 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,89,48,01,203 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,79,208 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.