ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,569 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 19 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,260 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 16,400 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,467 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,84,710 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 10,78,005 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,48,94,858 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,57,484 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.