ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,675 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 31 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524490 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 14841 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1635 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42600737 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 13,76,878 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,92,52,70,955 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,07,626 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.