alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 21,411 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದೆ

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 67 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5‌,25,997 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,50,100 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 20,726 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,31,92,379 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 34,93,209 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,01,68,14,771 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,80,202 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...