
ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,225 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 28 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 521129 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 14307 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1594 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42489004 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 22,27,307 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,84,06,55,005 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,07,987 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.