
ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 1399 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆದರೆ ಈ ಹಿಂದನ ಸಾವಿನ ಲೆಕ್ಕವನ್ನೂ ಈಗ ಸೇರಿಸಿರುವ ಕಾರಣ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎನ್ನಲಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,23,622 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 15,636 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,970 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42523311 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 1,87,95,76,423 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 22,83,224 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,49,197 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.