alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್‌ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್‌ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್‌ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,829 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 33 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,293 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15,647 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,549 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,87,259 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,97,695 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,65,00,770 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...