alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,323 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 25 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524348 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 14996 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2346 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42594801 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,32,383 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,92,12,96,720 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,99,382 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...