alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 25,782 ಕ್ಕೆ ತಲುಪಿದ ಸಕ್ರಿಯ ಪ್ರಕರಣಗಳ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 25,782 ಕ್ಕೆ ತಲುಪಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 4,518 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 9 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,701ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 25,782 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,779 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,30,852 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 2,57,187 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,94,12,87,000 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,78,059 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...