
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,757 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 40,370 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4,216 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,48,308 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 15,08,406 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,94,92,71,111 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,44,994 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.