alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ 23 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ 23 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 13,216 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು ಒಂದೇ ದಿನದಲ್ಲಿ 23 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 52,48,40ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 68,108 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8,148 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,90,845 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,99,824 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,00,42,768 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,84,924 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...