alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 284 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 284 ಜನ ಮಹಾಮಾರಿಗೆ ಬಲಿ

ನವದೆಹಲಿ: ರೂಪಾಂತರಿ ವೈರಸ್ ಅಟ್ಟಹಾಸದ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,553 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 284 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,81,770 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,22,801 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9,249 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34284561 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,82,376 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 25,75,225 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,45,44,13,005 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...