alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 30 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 30 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,506 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 30 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,077 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 99,602 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11,574 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,08,666 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 13,44,788 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,46,57,138 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,33,659 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...