
ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 28 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,270ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,15,212 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 15,394 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,29,07,327 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 9,95,810 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,98,20,86,763 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,54,465 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.