alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 16,000 ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 16,000 ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16,159 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 28 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,270ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,15,212 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 15,394 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,29,07,327 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 9,95,810 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,98,20,86,763 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,54,465 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) July 6, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...