
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 41 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,074 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,50,877 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,148 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,32,28,670 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 16,82,390 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,02,17,66,615 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,39,751 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.