ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 8,586 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,27,416ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 96,506 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,33,624 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 29,25,342 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,10,31,65,703 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,91,281 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.