alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 19,968 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ 673 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 511903ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 224187 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 48847 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42086383 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,81,336 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,37,22,697 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 11,87,766 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...