alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶಾದ್ಯಂತ ವರುಣಾರ್ಭಟ ಜೋರಾಗಿದ್ದು, ಮತ್ತೆ ಸಾಂಕ್ರಾಮಿಕ ರೋಗ ಭೀತಿ ಹೆಚ್ಚಾಗಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತಗೊಂಡಿರುವುದು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 6,168 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,932 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ 59,210 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,55,365 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 22,40,162 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,12,75,23,421 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,18,642 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) September 2, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...