
ದೇಶದಲ್ಲಿ ಈವರೆಗೆ 5,28,216 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 45,749 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,36,092 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 19,25,881 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,15,67,06,574 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,55,231 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.