alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸೋಂಕಿತರ ಸಾವಿನ ಸಂಖ್ಯೆಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸೋಂಕಿತರ ಸಾವಿನ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 11,499 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 255 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,13,481 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,21,881 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 23,598 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,22,70,482 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 28,29,582 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,77,17,68,379 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 11,36,133 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...