alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯೂ ಹೆಚ್ಚಳ; ಒಂದೇ ದಿನದಲ್ಲಿ 470 ಜನರು ಹೆಮ್ಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯೂ ಹೆಚ್ಚಳ; ಒಂದೇ ದಿನದಲ್ಲಿ 470 ಜನರು ಹೆಮ್ಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,919 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 470 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 464623 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 128762 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11242 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33885132 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,32,505 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 73,44,739 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,14,46,32,851 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...