alex Certify BIG BREAKING: ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 2.71 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 2.71 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 2.71 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 314 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 486066 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1550377 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 138331 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35085721 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 66,21,395 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,56,76,15,454 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,65,404 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 7,743 ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...