alex Certify BIG BREAKING: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ದಿಢೀರ್‌ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ದಿಢೀರ್‌ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 17,135 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ 47 ಮಂದಿ ಸಾವನ್ನಪ್ಪವುದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,477 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,37,057 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.49ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,03,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 23,49,651 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,04,84,30,732 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...