ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ನಡೆಯಲಿದೆ ಎನ್ನಲಾಗಿದ್ದ ಕೋವಿಡ್ ಸಭೆ ನಾಳೆಗೆ ಮುಂದೂಡಲಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕೋವಿಡ್ ಟಫ್ ರೂಲ್ಸ್ ವಿಚಾರವಾಗಿ ನಾಳೆ ಸಂಜೆ 4 ಗಂಟೆಗೆ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದೆ. ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಇನ್ನಷ್ಟು ಮುಂಜಾಗೃತೆ ಬಗ್ಗೆ ಚರ್ಚಿಸಲಾಗುವುದು ಎಂದರು.
BIG NEWS: ಆನ್ಲೈನ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾದ ಇನ್‌ಸ್ಟಾಗ್ರಾಂ
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ರೇಟ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ ತರುವ ಸಾಧ್ಯತೆ ಇದ್ದು, ನಾಳಿನ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆಯೂ ಬಿಬಿಎಂಪಿ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಆಗಸ್ಟ್ 15ರ ಬಳಿಕ ಸಿಲಿಕಾನ್ ಸಿಟಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಸಾಧ್ಯತೆ ದಟ್ಟವಾಗಿದ್ದು, ನಾಳಿನ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.